ಚಾಮರಾಜನಗರ : ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಹಾಗೂ ಅದರ ಅವಶ್ಯಕತೆಯೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಒಳ್ಳೇಯ ಅವಕಾಶವಿದೆ, ಬೇರೆ ಪಕ್ಷದವರು ಯಾರೊಂದಿಗಾದರೂ ಮೈತ್ರಿ ಮಾಡಿಕೊಳ್ಳಲಿ ನಮಗೇನು ಭಯವಿಲ್ಲ , ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಒಳ್ಳೆಯ ಫಲಿತಾಂಶ ಬರಲಿದೆ ಎಂದರು.
ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ , ಬೇರೆ ಪಕ್ಷದವರ ಬಗ್ಗೆ ಚಿಂತಿಸಿ ಫಲವಿಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಸರ್ಕಾರಕ್ಕೆ ರಾಜ್ಯದ ಜನತೆಯ ಬೆಂಬಲವಿದೆ ಎಂದರು.
ಈ ವೇಳೆ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್, ಮಾಜಿ ಶಾಸಕ ಆರ್ ನರೇಂದ್ರ ಹಾಜರಿದ್ದರು.