ಮೈಸೂರು : ಎನ್‌ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ವಿಚಾರ ಇದು ಎರಡು ಪಕ್ಷಗಳಿಗೂ ಶಕ್ತಿ ತರಲಿದೆ
ಮೈತ್ರಿಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆಯಾಗಿದೆ.
ಪ್ರಧಾನಿ ಮೋದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ರಾಜ್ಯದ ಹಿತಾಸಕ್ತಿಯಿಂದ ತೀರ್ಮಾನ.ಇದು ಒಳ್ಳೆಯ ತೀರ್ಮಾನವಾಗಿದೆ. ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ ಇದು ಎರಡು ಪಕ್ಷಗಳಿಗೂ ಅನುಕೂಲ ಆಗಲಿದೆ ಎಂದು ಜಿ ಟಿ ದೇವೇಗೌಡ ಟ್ವೀಟ್ ನಲ್ಲಿ ತಿಳಿಸಿದ್ದಾರೆ