ಮೈಸೂರು : ಮೈಸೂರಿನಲ್ಲೂ ಕಾವೇರಿದ ಕಾವೇರಿ ಕಿಚ್ಚು.
ಸರ್ಕಾರದ ವಿರುದ್ಧ ಇಂದು ವಕೀಲರು ಬೀದಿಗಿಳಿದ ಹೋರಾಟ ಮಾಡಿದರು.
ನಗರದ ಜಿಲ್ಲಾ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ವಕೀಲರು ಬೇಕೆ ಬೇಕು ನ್ಯಾಯ ಬೇಕು ಎಂದು ಆಕ್ರೋಶ ಹೊರಹಾಕಿದರು. ನಮ್ಮವಳು ನಮ್ಮವಳು ಕಾವೇರಿ ನಮ್ಮವಳು ಎಂದು ಘೋಷಣೆ ಕೂಗಿದರು.
ಸರ್ವ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ
ಸುಪ್ರೀಂ ಕೋರ್ಟ್ ಮರುಪರಿಶೀಲನೆ ಮಾಡಬೇಕು.
ಸಂಕಷ್ಟ ಸೂತ್ರ ಅನುಸರಿಸಬೇಕು ಎಂದು ಆಗ್ರಹ ಮಾಡಿದರು.
ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು
ಕೋರ್ಟ್ ಮುಂಭಾಗದ ರಸ್ತೆ ಬಂದ್ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು