ಚಾಮರಾಜನಗರ : ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ನದಿ ನೀರು ವಿವಾದದ ಹೋರಾಟದ 22 ನೇ ದಿನವಾದ ಸೋಮವಾರ ಕಿವಿ ಕೇಳಿಸದ ರಾಜ್ಯ ಸರ್ಕಾರಕ್ಕೆ ಗಂಟೆ ಹೊಡೆಯುವ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಿಂದ ದೊಡ್ಡ ಗಂಟೆಯನ್ನು ಹೊತ್ತುತಂದ ಕನ್ನಡ ಚಳವಳಿಗಾರರು ಶ್ರೀ ಭುವನೇಶ್ವರಿ ವೃತ್ತದಲ್ಲಿ ಇಟ್ಟು ರಾಜ್ಯ ಸರ್ಕಾರ ಮತ್ತು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಗಂಟೆ ಬಾರಿಸುತ್ತಾ ಕಿವಿಡಾಗಿರುವ ರಾಜ್ಯ ಸರ್ಕಾರವು ಈಗಲಾದರೂ ಎಚ್ಚೆದ್ದುಕೊಂಡು ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವುದನ್ನು ನಿಲ್ಲಿಸಬೇಕು, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ತಮಿಳುನಾಡು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ್ದರಿಂದ ಎರಡೂ ರಾಜ್ಯಗಳ ನಡುವೆ ವಾಹನ ಸಂಚಾರ ಬಂದ್ ಆಗಿದ್ದವು
ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಕುಮಾರ್, ರಾಜು , ಗು.ಪುರುಷೋತ್ತಮ್ ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು.