• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜನತಾ ದರ್ಶನ ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಜನತಾ ದರ್ಶನ ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ
ಜಿಲ್ಲೆಮೈಸೂರುರಾಜಕೀಯರಾಜ್ಯ

ಜನತಾ ದರ್ಶನ ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ

admin
Last updated: 2023/09/25 at 10:57 AM
admin
Share
4 Min Read
SHARE

ಮೈಸೂರು : ರೇಷನ್ ಕಾರ್ಡ್ ಬೇಕಿದೆ, ಖಾತೆ ಬದಲಾವಣೆ ಆಗಬೇಕು, ವಾಸಕ್ಕಾಗಿ ಮನೆ ಅಗತ್ಯವಿದೆ, ವಿದ್ಯುತ್ ಕಂಬ ಅಳವಡಿಸಿಕೊಡಿ, ವ್ಯವಸಾಯಕ್ಕೆ ಕೊಳವೇ ಬಾವಿ ಕೊಡಿಸಿ, ಸಣ್ಣಪುಟ್ಟ ಕೆಲಸ ಮಾಡಿಕೊಡಲು ಅಧಿಕಾರಿಗಳು ಸತಾಯಿಸುತ್ತಾರೆ. ಹೀಗೆ ವಿವಿಧ ಸಮಸ್ಯೆಗಳನ್ನು ಹೊತ್ತುಬಂದ ಜನರ ಕುಂದು ಕೊರತೆಗಳನ್ನು ಆಲಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತುರ್ತಾಗಿ ಪರಿಹಾರ ಕಲ್ಪಿಸಬೇಕೆಂದು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವಾದ ‘ಜನತಾ ದರ್ಶನಕ್ಕೆ’ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದಲ್ಲಿ ಸಚಿವರು ಚಾಲನೆ ನೀಡಿ, ಸಾರ್ವಜನಿಕರ ಅನೇಕ ಸಮಸ್ಯೆಗಳಿಗೆ ಕಿವಿಯಾದರು. ಸಂಕಷ್ಟಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಸಚಿವರು ಮಾತನಾಡಿ, ಜನರು ತಾಲ್ಲೂಕು ಕಚೇರಿಗೆ, ಪೊಲೀಸ್ ಠಾಣೆಗೆ, ಗ್ರಾಮ ಪಂಚಾಯಿತಿ ಕಚೇರಿ ಸೇರಿದಂತೆ ಅನೇಕ ಕೆಲಸಗಳಿಗಾಗಿ ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ತಿಂಗಳಪೂರ್ತಿ ಅಲೆಯಬಾರದು. ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಜನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡುವಲ್ಲಿ ತುರ್ತಾಗಿ ಕ್ರಮವಹಿಸಬೇಕು ಎಂದು ಸೂಚಿಸಿದರು.

ಬಡಜನರು ತಮ್ಮ ತಾಳಿ, ಓಲೆಗಳನ್ನು ಅಡವಿಟ್ಟು ಸರ್ಕಾರದ ಸೌಲಭ್ಯ ಪಡೆಯುಂಥ ಉದಾಹರಣೆ ಕಂಡಿದ್ದೇವೆ. ಇದ್ಯಾವುದಕ್ಕೂ ಅವಕಾಶ ನೀಡದೆ ನಮ್ಮ ಆಡಳಿತವನ್ನು ನೇರವಾಗಿ ಜನರ ಬಳಿಗೆ ಕರೆದೊಯ್ಯುವುದು ನಮ್ಮ ಸರ್ಕಾರದ ಉದ್ದೇಶ ಮತ್ತು ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಜನರೊಂದಿಗೆ ಸಂವಾದ ಮಾಡದಿದ್ದರೆ, ಅವರ ಕಷ್ಟ, ಕಾರ್ಪಣ್ಯ ಅರಿವಾಗುವುದಿಲ್ಲ. ಕಡ್ಡಾಯವಾಗಿ ತಿಂಗಳಲ್ಲಿ ಎಂಟು ದಿನ ಪ್ರವಾಸ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಸ್ಪಂದಿಸಿದರೆ ನಿಮ್ಮ ಕೆಲಸಕ್ಕೆ ಸಾರ್ಥಕತೆ ದೊರಕುತ್ತದೆ. ಜನರ ಕಷ್ಟಗಳನ್ನು ಸಕಾಲಕ್ಕೆ ಬಗೆಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ‌. ಇದನ್ನು ಗಮನದಲ್ಲಿರಿಸಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ನಮ್ಮ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯಾಗಿಸಲು ಅಭಿಯಾನ ನಡೆಸಿಬೇಕು. ಇದಕ್ಕಾಗಿ ಒಂದು ನಿರ್ದಿಷ್ಟ ಸಮಯ ನಿಗದಿಪಡಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ. ಎರಡು ವೇದಿಕೆಯನ್ನು ಮಾಡಿ ಒಂದಡೆ ಸಾರ್ವಜನಿಕರು ಮತ್ತೊಂದೆಡೆ ಅಧಿಕಾರಿಗಳು ಮುಖಾಮುಖಿಯಾಗಿ ಕುಳಿತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಸರ್ಕಾರ ಹಾಗೂ ಜಿಲ್ಲಾಡಳಿತ ಜನಸ್ನೇಹಿಯಾಗಿದೆ ಎಂಬ ಸಂದೇಶ ರವಾನಿಸಬೇಕು ಎಂದು ಸಲಹೆ ನೀಡಿದರು.

ಅಧಿಕಾರಿಗಳು ಅತ್ಯಂತ ಪ್ರಾಮಾಣಿಕ, ಪಾರದರ್ಶಕ ಮತ್ತು ನಿಷ್ಠಾವಂತಿಕೆಯಿಂದ ಕೆಲಸ ಮಾಡಬೇಕು. ವೈಯಕ್ತಿಕ ಹಿತಾಶಕ್ತಿಗಾಗಿ ಸರ್ಕಾರಿ ಸೇವೆಯನ್ನು ದುರುಪಯೋಗ ಮಾಡಿಕೊಳ್ಳಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡಿ, ಹಗರಣ ರಹಿತವಾಗಿ ಕರ್ತವ್ಯ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸಾಗಿದರೆ ಮಾತ್ರ ಸರ್ಕಾರದ ಉದ್ದೇಶ ಹಾಗೂ ಅಧಿಕಾರಿಗಳು ಇರುವ ಉದ್ದೇಶ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಆಡಳಿತ ಚುರುಕುಗೊಳಿಸಿ, ಜನರ ಪರವಾಗಿ ಕೆಲಸ ಮಾಡಬೇಕು. ತಾಲ್ಲೂಕು ವ್ಯಾಪ್ತಿಯಲ್ಲಿ ಜನತಾ ದರ್ಶನ ಮಾಡಬೇಕು. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಜನರಿಗೆ ಸಿಗಬೇಕಾದ ಸೌಲಭ್ಯ ದೊರಕಬೇಕು. ಕಾನೂನಿನ ಚೌಕಟ್ಟಿನಲ್ಲಿ ಸಂವಿಧಾನ ಬದ್ದವಾಗಿ ನಿಮ್ಮ ಅಧಿಕಾರದ ವ್ಯಾಪ್ತಿಗೂ ಮೀರಿ ಬಡವರು, ಸಾಮಾನ್ಯ ಜನರಿಗೆ ನ್ಯಾಯಯುತವಾಗಿ ಸಹಾಯ ಮಾಡಬೇಕು ಎಂದು ಹೇಳಿದರು.

ವೃದ್ಧರಾದ ವೆಂಕಟಮ್ಮ (83) ಅವರು ತಮ್ಮ ಗಂಡುಮಕ್ಕಳಿಂದ ಜೀವನ ನಿರ್ವಹಣೆಗಾಗಿ ಪರಿಹಾರ ಕೊಡಿಸಬೇಕೆಂದು ಸಚಿವರಲ್ಲಿ ಅವಲತ್ತುಕೊಂಡರು. ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಜೀವನ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ವೆಚ್ಚವನ್ನು ನ್ಯಾಯಾಲಯದ ತೀರ್ಮಾನದಂತೆ ಕೊಡಿಸಲಾಗುವುದು ಎಂದು ಭರವಸೆ ನೀಡಿ, ಬಳಿಕ ಸ್ಥಳದಲ್ಲೇ ಸೂಕ್ತ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಿವೃತ್ತ ಸೈನಿಕ ಸಿದ್ದಣ್ಣಯ್ಯ ಅವರು ಸರ್ಕಾರದಿಂದ ತಮಗೆ ಬರಬೇಕಾದ ನಿವೇಶನದ ಬಗ್ಗೆ ಮನವಿ ಮಾಡಿಕೊಂಡರು. ಸೈನಿಕರು ತಮ್ಮ ಸಂಸಾರವನ್ನು ತೊರೆದು ದೇಶದ ಗಡಿಯಲ್ಲಿ ಜೀವವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸಿರುತ್ತಾರೆ. ಮೊದಲು ಅವರನ್ನು ಗೌರವಿಸಬೇಕು. ಅವರಿಗೆ ಕಾನೂನಿಕ ಪ್ರಕಾರ ಸಿಗಬೇಕಾದ ಸೌಲಭ್ಯವನ್ನು ಯಾವುದೇ ಕಾರಣಕ್ಕೂ ತಡಮಾಡದೆ ನಿವೇಶನ ದೊರಕಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಂಚಾರ ಪೊಲೀಸರು ಎಲ್ಲೆಂದರಲ್ಲಿ ವಾಹನ ತಡೆದು ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ವಿಧಿಸುತ್ತಾರೆ‌. ಇದರಿಂದ ಬಡಜನರಿಗೆ ತೊಂದರೆ ಉಂಟಾಗುತ್ತಿದೆ ವಿಚಾರ ಕುರಿತು ಮಾತನಾಡಿದರ ಸಚಿವರು, ಏಷ್ಯಾಖಂಡದಲ್ಲೇ ಹೆಚ್ಚು ಜನರು ರಸ್ತೆ ಅಪಘಾತದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿದಿನ ಶೇ 2.5 ರಷ್ಟು ಮಂದಿ ಅಪಘಾತಕ್ಕೆ ಒಳಗಾಗುತ್ತಾರೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಸಂಚಾರ ಪೊಲೀಸರು ಹೆಲ್ಮೆಟ್ ಹಾಕದವರಿಗೆ ದಂಡ ವಿಧಿಸುತ್ತಿದ್ದಾರೆ ಹೊರತು, ಜನರಿಂದ ಹಣ ವಸೂಲಿ ಮಾಡುವ ದುರುದ್ದೇಶವಿಲ್ಲ. ಮುಂದಿನ ದಿನಗಳಲ್ಲಿ ಹೆಲ್ಮೆಟ್ ಧರಿಸುವಂತೆ ಅಭಿಯಾನ ರೂಪದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲು ಸೂಚಿಸಲಾಗುವುದು ಎಂದು ತಿಳಿಸಿದರು.

ಅನ್ವರ್ ಎಂಬುವರು ಮಾತನಾಡಿ, ನಮ್ಮ ಕುಟುಂಬಕ್ಕೆ ರೇಷನ್ ಕಾರ್ಡ್ ಬೇಕಿದೆ. ಆಹಾರ ಧಾನ್ಯ ಪಡೆಯಲು ಇಲ್ಲದಿದ್ದರೂ, ಆರೋಗ್ಯ ತಪಾಸಣೆಗೆ ನಮಗೆ ಅಗತ್ಯವಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಈ ವಿಷಯ ಕುರಿತು ಆಹಾರ ಇಲಾಖೆಯಲ್ಲಿ ಅಧಿಕಾರಿಯನ್ನು ಕೇಳಿದಾಗ, ಇವರು ರೇಷಾನ್ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ ರೇಷನ್ ಕಾರ್ಡ್ ನೀಡಲು ಸರ್ಕಾರದಿಂದ ಕೆಲವು ಮಾನದಂಡಗಳಿಗೆ ರೂಪಿಸಲಾಗಿದೆ. ಆ ನಿಯಮಗಳಿಗೆ ಅನುಗುಣವಾಗಿ ಅರ್ಹರಿಗೆ ಮಾತ್ರ ನೀಡಲಾಗುತ್ತದೆ. ಆದರೆ ನೀವು ಆರೋಗ್ಯ ಚಿಕಿತ್ಸೆಗಾಗಿ ಮನವಿ ಮಾಡಿದ್ದೀರಿ. ಇದಕ್ಕೆ ಪೂರಕವಾಗಿ ನಿಮ್ಮ ಆರೋಗ್ಯವನ್ನು ಗಮನದಲ್ಲಿರಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಮನವರಿಕೆ ಮಾಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಕುರಿತು ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಒಬ್ಬರ ಸ್ವತ್ತನ್ನು ಮತ್ತೊಬ್ಬರಿಗೆ ಖಾತೆ ಮಾಡಿಕೊಡುವುದು ಹಾಗೂ ನಿಯಮ ಉಲ್ಲಂಘಿಸಿ ಬಡಜನರಿಗೆ ಮೋಸ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Hcmahadevappa mysuru Siddaramiah dkshivakumar hcmahadevappa janatadarshana
admin September 25, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಪಿಲಾ ನದಿ ಸೇತುವೆ ಮೇಲೆ ಮಲಗಿ ರೈತರ ಪ್ರತಿಭಟನೆ
Next Article ಕರ್ನಾಟಕ ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?