ತಮಿಳುನಾಡು :ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನ ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ
ಕರ್ನಾಟಕದ ವಾದ ಏನಿತ್ತು?
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.
ತಮಿಳುನಾಡು ವಾದ ಏನಿತ್ತು?
ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು.
ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.