ಚಾಮರಾಜನಗರ : ಸಿದ್ದರಾಯಮಯ್ಯರವರು ಎರಡನೇ ಭಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲನೇ ಭಾರಿಗೆ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ರಾತ್ರಿ ಆಗಮಿಸಿದರು.
ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇನ್ನಿತರ ಸಚಿವರನ್ನು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದಿಂದ ಜಾನಪದ ಕಲಾತಂಡಗಳ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು.
ಮಂಗಳವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಎ.ಆರ್. ಕೃಷ್ಣಮೂರ್ತಿ ಮಾಜಿ ಶಾಸಕ ಆರ್ ನರೇಂದ್ರ ಮಹದೇಶ್ವರ ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ವಾಸ್ತವ್ಯ ಹೂಡಿದ್ದರು.
ಜಿಲ್ಲಾಧಿಕಾರಿ ಶಿಲ್ಪನಾಗ್, ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು, ಶ್ರೀ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.