ಚಾಮರಾಜನಗರ : ಕಾವೇರಿ ನದಿ ನೀರನ್ನು ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ಸ್ ನ್ನು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಹರಿಸುವಂತೆ ಕಾವೇರಿ ನದಿ ನೀರು ಹಂಚಿಕೆ ನಿಯಂತ್ರಣ ಪ್ರಾಧಿಕಾರದ ಸೂಚನೆಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಮಾದ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರದ ಕುರಿತು ಚ್ಯಾಲೆಂಜ್ ಮಾಡ್ತೇವೆ, ಸದ್ಯ ನಮ್ಮ ಬಳಿ ನೀರು ಇಲ್ಲ ಈಗಾಗ್ಲೆ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ, ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದರು.
ಈಗಾಗಲೇ ಚಾಮರಾಜನಗರಕ್ಕೆ ಅಂಟಿದ ಮೌಡ್ಯ ತೊಡೆದು ಹಾಕಿರುವೆ, ಕಳೆದ ಬಾರಿ 12 ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ, ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ ವಿಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಲೇ ಇರುತ್ತೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಮಳೆಗಾಗಿ ಮಾದಪ್ಪನ ಮೊರೆ ಹೋಗಿರುವುದುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾದಪ್ಪನ ಬಳಿ ದೇವರಲ್ಲಿ ಪ್ರಾರ್ಥಿಸಿರುವೆ ತೀವ್ರ ಬರಗಾಲದ ಹಿನ್ನೆಲೆ ಮಳೆಗಾಗಿ ಮೊರೆ ಹೋಗಿರುವೆ, ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿರುವೆ, ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನೀರೀಕ್ಷೆ ಇದೆ ಎಂದು ಸಿದ್ದರಾಮಯ್ಯ ಹೇಳಿದರು.