ಮೈಸೂರು : ಬಿಜೆಪಿ ಜೆಡಿಎಸ್ ಮೈತ್ರಿ ಹಿನ್ನಲೆ
ಮೈಸೂರಿನಲ್ಲಿ ಜೆಡಿಎಸ್ ಮುಖಂಡರ ಸಾಮೂಹಿಕ ರಾಜೀನಾಮೆ ಮೈಸೂರಿನ ನರಸಿಂಹರಾಜ ಕ್ಷೇತ್ರದ ಅಲ್ಪಸಂಖ್ಯಾತ ಮುಖಂಡರ ಸಾಮೂಹಿಕ ರಾಜೀನಾಮೆ
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಾಹಿದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ರಾಜೀನಾಮೆ ನೀಡಿದ್ದಾರೆ.
ಹಂಚೆ ಮೂಲಕ ರಾಜೀನಾಮೆ ರವಾನಿಸಿದ ನಾಯಕರು
ಜ್ಯಾತ್ಯಾತೀತ ಎಂದು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಿದ್ದು ಈಗ ಕೋಮುವಾದಿ ಬಿಜೆಪಿ ಪಕ್ಷದ ಜೊತೆ ಜೆಡಿಎಸ್ ಮೈತ್ರಿ ಸರಿಯಲ್ಲ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕೋಮು ಸೌಹಾರ್ದತೆ ಹಾಳು ಮಾಡಿದ್ದಾರೆ. ಅಂತವರ ಜೊತೆ ಹೋಗಲು ನಮಗೆ ಇಷ್ಟವಿಲ್ಲ ಎಂದು ಶಾಹಿದ್ ತಿಳಿಸಿದ್ದಾರೆ.
ಕುಮಾರಸ್ವಾಮಿ ನಿಖಿಲ್ ಬಿಜೆಪಿ ಜೊತೆ ಕೈ ಜೋಡಿಸಿ ಪಕ್ಷ ವಿರೋಧಿ ಚಟವಟಿಕೆಯಲ್ಲಿ ತೊಡಗಿದ್ರು
ಈ ಕುರಿತು ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಾಧ್ಯಕ್ಷ ಇಬ್ರಾಹಿಂ ಗೆ ಮನವಿ ಮಾಡಿದ್ದೆ
ನಮ್ಮ ಮನವಿಗೆ ಸ್ಪಂದಿಸದ ಕಾರಣ ನಾವು ಸಭೆ ನಡೆಸಿ ರಾಜೀನಾಮೆಗೆ ಮುಂದಾಗಿದ್ದೇವೆ
ಮೈಸೂರಿನಿಂದಲೇ ರಾಜೀನಾಮೆ ಪರ್ವ ಆರಂಭವಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಶಾಹಿದ್ ಹೇಳಿದರು