ಚಾಮರಾಜನಗರ : ನಿಷೇಧಿತ ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಅರಕನಹಳ್ಳದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರ ಬಳಿ ಇರುವ ಅರಕನಹಳ್ಳ ನಿಷೇಧಿತ ಪ್ರದೇಶದಲ್ಲಿ ಕಿಡಿಗೇಡಿಗಳು ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ, ಕಾಡು ಪ್ರಾಣಿಗಳು ಸಂಚರಿಸುವ ಮಾರ್ಗದಲ್ಲಿ ವಾಮಾಚಾರ ಮಾಡಿದ್ದು ಬೆಳಕಿಗೆ ಬಂದಿದೆ.
ನಿಷೇಧಿತ ಅರಣ್ಯ ಪ್ರದೇಶದೊಳಗೆ ಸಾರ್ವಜನಿಕರಿಗೆ ಇಲ್ಲದ ಪ್ರವೇಶ ವಾಮಾಚಾರ ಮಾಡುವ ಕಿಡಿಗೇಡಿಗಳಿಗೆ ಅನ್ವಯವಿಲ್ಲವೇ, ಅರಣ್ಯ ಇಲಾಖೆಯವರು ಈ ಎಲ್ಲಾ ಬೆಳವಣಿಗೆ ತಿಳಿದಿದ್ದರೂ ಮೌನವಹಿಸಿದ್ದಾರಲ್ಲ ಏಕೆ ಎಂದು ಸಾರ್ವಜನಿಕರು ಅರಣ್ಯಾಧಿಕಾರಿಗಳ ಮೌನವನ್ನು ಪ್ರಶ್ನೆ ಮಾಡಿದ್ದಾರೆ.