ಚಾಮರಾಜನಗರ : ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದೆ.
ಮಹದೇಶ್ವರ ಬೆಟ್ಟ ಹಾಗೂ ಸುತ್ತ ಮುತ್ತಲು ಕ್ಷೇತ್ರದ ಪ್ರಾವಿತ್ರತ್ಯೆ ಕಾಪಾಡುವ ಸಲುವಾಗಿ ಮದ್ಯ ಮಾರಾಟ ಸಂಪೂರ್ಣ ನಿಷೇಧ ಇದ್ದರೂ ಅಕ್ರಮವಾಗಿ ಅಲ್ಲಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಸಂಗತಿ ಮುಖ್ಯಮಂತ್ರಿಗಳ ಗಮನಕ್ಕೆ ಬಂದ ಬಳಿಕ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಹಾಗೂ ಸಾರ್ವಜನಿಕರಿಗೆ ಮದ್ಯೆ ಸಿಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ , ಪೊಲೀಸ್ ಮತ್ತು ಅಬ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಮುಖ್ಯ ಮಂತ್ರಿಗಳ ಸೂಚನೆಯನ್ನು ಜಿಲ್ಲಾಡಳಿತ , ಪೊಲೀಸ್ , ಅಬ್ಕಾರಿ ಇಲಾಖೆ ಗಂಭೀರವಾಗಿ ಪರಿಗಣಿಸಿ ಮಹದೇಶ್ವರ ಬೆಟ್ಟಕ್ಕೆ ಬರುವ ದ್ವಿಚಕ್ರ ಹಾಗೂ ಕಾರುಗಳ ಚಾಲನೆ ಮಾಡುವವರನ್ನು ತೀವ್ರ ತಪಾಸಣೆ ಮಾಡಲಾಗುತ್ತಿದ್ದ ಪರಿಣಾಮ ಹೆಚ್ಚಾಗಿ ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳು ಮಹದೇಶ್ವರ ಬೆಟ್ಟ , ರಾಮಾಪುರ, ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿ ವಾಹನಗಳನ್ನು ಜಪ್ತಿ ಪಡಿಸಿಕೊಳ್ಳಲಾಗುತ್ತಿದೆ.