ಮೈಸೂರು : ಶಿವಮೊಗ್ಗ ಗಲಭೆ ಪ್ರಕರಣವನ್ನು ಒಂದು ಸಣ್ಣ ಘಟನೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ವಿರುದ್ಧ ಅಡ್ಡಂಡ ಕಾರ್ಯಪ್ಪ ಟೀಕಾಪ್ರಹಾರ ನಡೆಸಿದ್ದಾರೆ.
ಥೂ,ಪರಮೇಶ್ವರ್ ಗೆ ನಾಚಿಕೆಯಾಗಬೇಕು.
ರಾಜ್ಯದ ಹಲವೆಡೆ ಪೊಲೀಸರ ಮೇಲೂ ಹಲ್ಲೆಗಳು ನಡೆಯುತ್ತಿವೆ.ಪೊಲೀಸರ ಮೇಲೆ ಹಲ್ಲೆ ನಡೆದರೆ ಗೃಹ ಸಚಿವರ ಮೇಲೆ ಹಲ್ಲೆ ನಡೆದಂತೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆಯಲಾಗಿದೆ.
ಇದು ರಾಜ್ಯ ಸರ್ಕಾರದ ಮನಸ್ಥಿತಿಯನ್ನು ತೋರಿಸಿದೆ.
ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಓಲೈಕೆಯಲ್ಲಿ ತೊಡಗಿದೆ.ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತಾಗಿದೆ ಎಂದರು
ಬಿಜೆಪಿ ಸರ್ಕಾರವನ್ನ 40% ಸರ್ಕಾರ ಎಂದು ಟೀಕಿಸುತ್ತಿದ್ದರು.ಈಗಿರುವ ಕಾಂಗ್ರೆಸ್ ಸರ್ಕಾರ 80% ಸರ್ಕಾರವಾಗಿದೆ.ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನು ಲೂಟಿ ಮಾಡುತ್ತಿದೆ.ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರನನ್ನೇ ಲೂಟಿ ಮಾಡಲು ಮುಂದೆ ಬಿಟ್ಟಿದ್ದಾರೆ.
ಇವರ ಸರ್ಕಾರ ಬಂದ ಮೇಲೆ ರಾಜ್ಯಕ್ಕೆ ಭೀಕರ ಬರಗಾಲ ಬಂದಿದೆ.ಕೊಡಗು ಜಿಲ್ಲೆಯಲ್ಲೇ ಜಲಮೂಲಗಳು ಬತ್ತಿ ಹೋಗಿವೆ.ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಗರಗಳಿಗೆ ಕುಡಿಯುವ ನೀರು ಸಿಗುವುದಿಲ್ಲ.
ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಸರ್ಕಾರ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾವೇರಿ ಜಲವಿವಾದದ ವಿಚಾರದಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲೂ ರಾಜ್ಯ ಸರ್ಕಾರ ವಿಫಲವಾಗಿದೆ.
ರಾಜ್ಯ ಸರ್ಕಾರದ ವೈಫಲ್ಯದ ಫಲವಾಗಿ ಯತೇಚ್ಚ ನೀರು ತಮಿಳುನಾಡಿಗೆ ಹರಿದು ಹೋಗಿದೆ.
ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ.
ಅಡ್ಡಂಡ ಕಾರ್ಯಪ್ಪ ಹೇಳಿದರು