ಚಾಮರಾಜನಗರ : ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯ ಮಂಗಲಂ ನಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ಮೂಲಕ ಕಬ್ಬು ತುಂಬಿದ ಲಾರಿಯೊಂದು ಸತ್ಯಮಂಗಲಂ ಬಳಿಯ ಖಾಸಗಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು. ಕೊಂಬು ಪಲ್ಲಂ ಎಂಬಲ್ಲಿ ಲಾರಿ ಸಾಗುತ್ತಿದ್ದಾಗ ಆ ಪ್ರದೇಶದಲ್ಲಿ ಹಾಕಲಾಗಿದ್ದ ಸ್ಪೀಡ್ ಬ್ರೇಕರ್ ಗಳನ್ನು ಹಾದು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯಲ್ಲಿದ್ದ ಕಬ್ಬು ಸಂಪೂರ್ಣ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂಗೊಂಡಿದೆ. ಈ ವೇಳೆ ಲಾರಿ ಅಪಘಾತದ ದೃಶ್ಯ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.