ಚಾಮರಾಜನಗರ: ಕರ್ನಾಟಕ ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಸಂಪರ್ಕ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದಲ್ಲಿ ಹುಲಿಗಳ ಹಿಂಡು ರಸ್ತೆ ದಾಟುವ ದೃಶ್ಯ ಇದೀಗ ವೈರಲ್ ಆಗಿದೆ.
ಬಂಡೀಪುರದ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ಕಾಡಿನಿಂದ ಬಂದ ಐದು ಹುಲಿಗಳ ತಂಡ ಒಂದಾದ ಮೇಲೆ ಒಂದು ಹುಲಿಗಳು ರಸ್ತೆ ದಾಟುವ ದೃಶ್ಯ ವಾಹನಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.