ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು.
ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು.
ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.