ಚಾಮರಾಜನಗರ: ರೈತರ ವಿರೋಧಿಯಾಗಿರುವ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾಪಾರ್ಟಿಯು ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯಲ್ಲಿ ರಸ್ತೆ ತಡೆದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿತು.
ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿ ಗ್ರಾಮದ ವೃತ್ತದಲ್ಲಿ ಮಾಜಿ ಶಿಕ್ಷಣ ಸಚಿವ ಹಾಗೂ ಮಾಜಿ ಶಾಸಕ ಎನ್. ಮಹೇಶ್, ಮಾಜಿ ಶಾಸಕ ಎಸ್ ಬಾಲರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಜಮೀನಿಗೆ ಕನಿಷ್ಟ ವಿದ್ಯುತ್ ಸರಭರಾಜು ಮಾಡದೇ ರೈತರ ವಿರೋಧಿತನವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು.