ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ , ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜೋ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.