ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಜೀಯವರ 108ನೇ ಜಯಂತೋತ್ಸವಕ್ಕೆ ಗೋವಾ ರಾಜ್ಯಪಾಲರಾದ ಟಿ ಎಸ್ ಶ್ರೀದರನ್ ಪಿಳ್ಳೆ ರವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಜಗದ್ಗುರು ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಶಕ್ತಿ ಎಂದು ನಂಬಿದ್ದರು ದೇಶದ ಉದ್ದಗಲಕ್ಕೂ ಶೈಕ್ಷಣಿಕ ಕೇಂದ್ರಗಳನ್ನು ಸ್ಥಾಪನೆ ಮಾಡಿ ಪ್ರತಿಯೊಬ್ಬರಿಗೂ ಶಿಕ್ಷಣ ಕೊಡಿಸಲು ಶ್ರಮಿಸಿದ್ದರು.
ಪ್ರತಿಯೊಬ್ಬರೂ ಶಿಕ್ಷಿತರಾಗಬೇಕೆಂದು ಎಂದು ಕನಸ್ಸನ್ನು ಕಂಡಿದ್ದರು. ಈ ದಿಸೆಯಲ್ಲಿ ಅವರ ಕನಸು ಈಡೇರುತ್ತಾ ಇದ್ದುಭಾರತದ ಪ್ರತಿಯೊಂದು ಕ್ಷೇತ್ರಗಳಲ್ಲೂ ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಗಳು ಕಾರ್ಯವನ್ನು ನಿರ್ವಹಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಎಂಆರ್ ಮಂಜುನಾಥ್ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಮಾಜಿ ಶಾಸಕಿ ಪರಿಮಳನಾಗಪ್ಪ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಜರಿದ್ದರು.