ಮೈಸೂರು : ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು, ಡಿ.ಕೆ ಶಿವಕುಮಾರ್ ಸಿಎಂ ಆಗಬೇಕಂಬ ವಿಚಾರ ಕ್ಕೇ ಮೈಸೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದು ಅವರವರ ವೈಯಕ್ತಿಕ ಹೇಳಿಕೆ.
ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಮುಂದುವರೆಯಬೇಕು ಎಂಬುದನ್ನ ನಿರ್ಧರಿಸುತ್ತೆ.
ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರು ನಾನು ಸಿದ್ದನಿದ್ದೇನೆ,ಸಿಎಂ ಅಧಿಕಾರ ಹಂಚಿಕೆ ವಿಚಾರ.
ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ.
ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ.
ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ.
ಜಿಲ್ಲಾ ಪಂಚಯಾತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲಾರಿಗೂ ತಮ್ಮ ಅಭಿಪ್ರಾಯ ಹೇಳಲು.
ಸ್ವಾತಂತ್ರವಿದೆ.ಇದರಲ್ಲಿ ತಪ್ಪು ಏನು ಇಲ್ಲ.
ಆದ್ರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ.
ಎಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು