ಬಳ್ಳಾರಿ : ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವ ಹಾಗಿಲ್ಲ ಎಂದರು.
ಕಾಕತಾಳೀಯ
ಕರ್ನಾಟಕ ಸಂಭ್ರಮ – 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ ಎಂದರು.ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.