ಮೈಸೂರು : ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಇಡೀ ದೇಶದಲ್ಲಿ ಯಾವುದೇ ವ್ಯಕ್ತಿ ಕೇಳಿದ್ರು ಮೋದಿ ಗೊತ್ತು.ವಿಶ್ವದ ಯಾರನ್ನೆ ಕೇಳಿದ್ರೂ ಈ ದೇಶದ ಪ್ರಧಾನಿ ಯಾರು ಅಂತಾ ಹೇಳ್ತಾರೆ.ನಿಮ್ಮ ನಾಯಕ ಯಾರು..?ರಾಹುಲ್ ಗಾಂಧಿನಾ..?ಲೀಡರ್ ಲೆಸ್ ಅಂತಾ ಹೇಳೊದು ಬಹಳ ಸುಲಭ.ರಾಜ್ಯದಲ್ಲಿ ನಿಮ್ಮ ಇಬ್ಬರು ಲೀಡರ್ಗಳು ಕುಸ್ತಿ ಆಡ್ತಿದ್ದಾರೆ.ಇದನ್ನ ಲೀಡರ್ ಪಕ್ಷ ಅಂತಾ ಕರೆಯುತ್ತಿರಾ ಸಚಿವ ಪ್ರಿಯಾಂಕ ಖರ್ಗೆಗೆ ಕೆ.ಎಸ್ ಈಶ್ವರಪ್ಪ ಪ್ರಶ್ನೆ ಮಾಡಿದರು.
ನಾವು ಹೆಮ್ಮೆಯಿಂದ ಹೇಳಿಕೊಳ್ತಿವಿ ನಮ್ಮ ನಾಯಕ ಮೋದಿ ಅಂತಾ.ಯಾವ ಹಳ್ಳಿಯಲ್ಲಿ ನಿಮ್ಮ ರಾಹುಲ್ ಗಾಂಧಿ ಹೆಸರೇಳುತ್ತಾರೆ..?
ಪ್ರಿಯಾಂಕ ಖರ್ಗೆಗೆ ಮಾನಮರ್ಯಾದೆ ಇದ್ದಿದ್ರೆ ಪ್ರಾರಂಭದಲ್ಲಿ ಸಿದ್ದರಾಮಯ್ಯ ಸಿಎಂ ಆಗಿರಲಿ ಅಂದವರು ಈಗ ನಾನೇ ಸಿಎಂ ಸಿಎಂ ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ.
ಇದು ಯಾವ ನ್ಯಾಯ.ಸಿದ್ದರಾಮಯ್ಯ ಸಿಎಂ ಅಂತಿದ್ದ ಸಚಿವ ರಾಜಣ್ಣ ನಿನ್ನೆ ಇದ್ದಕ್ಕಿದ್ದಂತೆ ಪರಮೇಶ್ವರ್ ಸಿಎಂ ಆಗಲಿ ಅಂದಿದ್ದಾರೆ.ಸಿದ್ದರಾಮಯ್ಯರನ್ನ ಕೈ ಬಿಟ್ಟರು.
ಈಗ ಕಾಂಗ್ರೆಸ್ಗೆ ಬಂದಿರುವ ದುಸ್ಥಿತಿ ಹಿಂದೆ ಯಾವ ಸರ್ಕಾರಕ್ಕೂ ಬಂದಿಲ್ಲ.ಹಾಗಾಗಿ ರಾಜೀನಾಮೆ ಕೊಟ್ಟು ಹೋಗಿ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹೇಳಿದರು