ಮೈಸೂರು : ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ.
ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ.ನನ್ನನ್ನು ಪಕ್ಷದಿಂದ ಬಿಟ್ಟುಹೋಗು ಅಂತ ಹೇಳಲು ಈಶ್ವರಪ್ಪ ಯಾರು.ಈಶ್ವರಪ್ಪ ಏನು ರಾಜ್ಯಧ್ಯಕ್ಷನ.ಈಶ್ವರಪ್ಪ ನಂಬಿ ಪಕ್ಷಕ್ಕೆ ಬರಲಿಲ್ಲ.
ನಾನು ಯಡಿಯೂರಪ್ಪ ನಂಬಿ ಪಕ್ಷಕ್ಕೆ ಬಂದಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ವಾಗ್ದಾಳಿ ನಡೆಸಿದರು
ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜೊತೆ ಮಾತನಾಡಿದ್ದೇನೆ.ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ.
ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ.
ಈಗ ಯಾರೋ 5 ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿಲ್ಲ.ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವ.ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವ.
ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲವ.
ಕೇವಲ ನನ್ನನ್ನೆ ಏಕೆ ಟಾರ್ಗೆಟ್ ಮಾಡುತ್ತಿರಾ.
ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ.
ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ.
ಇದಕ್ಕೆ ಮಹತ್ವ ಬೇಡ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು