ಮೈಸೂರು : ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ.ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ದವೇ
ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ನಾನು ಕಾಂಗ್ರೆಸ್ ನಲ್ಲಿದ್ದವನು.ಅವರಾಗೆ ಪಕ್ಷಕ್ಕೆ ಸೇರಿಸಿಕೊಂಡರು.ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ.
ನನ್ನನ್ನ ಪಕ್ಷ ಬಿಡಿಸಲು ಅಂತ ರೆಡಿಯಾಗಿದ್ದಾರೆ.
ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ.
ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ.ಇದರಲ್ಲಿ ತಪ್ಪೇನಿದೆ.
ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ.
ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ.ಇದು ನನ್ನ ಕ್ಷೇತ್ರರ ಜನರಿಗೆ ಅನುಕೂಲವಾಗಿದೆ ಎಂದರು.
ಆದ್ರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ ಅದನ್ನ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ.ಅರೇ ಸರ್ಕಾರ ಯಾವುದಾದರೂ ಇರಲಿ.
ಜನಕ್ಕೆ ಒಳ್ಳೆಯದು ಮಾಡುವುದು ಬೇಡವ ಎಂದು ಪ್ರಶ್ನೆ ಮಾಡಿದರು.