ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಮೀಕ್ಷೆ ಆರಂಭಿಸಿದ್ದೇವೆ. ಜಿಲ್ಲೆಗೆ ಮರು ನಾಮಕರಣ ಮಾಡುವುದು ಖಚಿತ, ವೈಯಕ್ತಿಕ ನೆಲೆಯಲ್ಲಿ ಸಮೀಕ್ಷೆ ಮಾಡುತ್ತಿದ್ದೇನೆ. ಈವರೆಗೆ ಸಮೀಕ್ಷೆಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಹೇಳಿದ್ದಾರೆ.
ರಾಮನಗರ ಜಿಲ್ಲೆಗೆ ಮರು ನಾಮಕರಣ ಮಾಡಿದ ನಂತರ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಸ್ಯಾಟಲೈಟ್ ಟೌನ್ಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರ ಪ್ಲಾನ್ ಮಾಡಿದೆ. ‘ನಮ್ಮ ಮೆಟ್ರೊ’ವನ್ನು ಎಲ್ಲ ನಾಲ್ಕು ತಾಲ್ಲೂಕುಗಳಿಗೂ ವಿಸ್ತರಿಸಲು ಸಮೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ