ಮೈಸೂರು : ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜಯ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಡಿಸಿದ್ದಾರೆ.
ಇಂದು ಮಧ್ಯಪ್ರದೇಶ, ಛತ್ತೀಸ್ ಘಡ್ ನಲ್ಲಿ ಮತದಾನ ನಡೆಯುತ್ತಿದೆ.ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ಗಡ, ರಾಜ್ಯಸ್ಥಾನ, ಮಿಜೋರಾಂ ಎಲ್ಲಾ ಕಡೆ ಕಾಂಗ್ರೆಸ್ ಗೆಲ್ಲುತ್ತದೆ.ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ.
ಈಗ ನವೆಂಬರ್ನಲ್ಲಿ ಇದ್ದೇವೆ.
ಲೋಕಸಭೆ ಚುನಾವಣೆಗೆ ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ.
ರಾಮಮಂದಿರ ನಿರ್ಮಾಣ ಹೊಸ ವಿಚಾರ ಅಲ್ಲ.
ರಾಮಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ.
ಸುಪ್ರೀಂಕೋರ್ಟ್ನಲ್ಲಿ ತೀರ್ಮಾನ ಆಗಿದೆ.
ಅದರಂತೆ ದೇವಾಲಯ ನಿರ್ಮಾಣ ಆಗುತ್ತಿದೆ.
ರಾಮಮಂದಿರದಿಂದ ಮತದಾರರು ಬದಲಾವಣೆ ಆಗುತ್ತಾರೆ ಅನ್ನೋದು ತಪ್ಪು.
ದೇಶದ ಜನ ವಿವಿಧತೆಯಲ್ಲಿ ಏಕತೆ ಬಯಸುತ್ತಾರೆ.
ಬ್ರಿಟೀಷರು, ಮೊಘಲರ ದಾಳಿಯ ನಂತರವೂ ದೇಶ ಒಂದಾಗಿದೆ.
ಬೇರೆ ಬೇರೆ ವೇಶ, ಭಾಷೆ ಇದ್ದರೂ ಒಗ್ಗಟ್ಟು ಇದೆ.
ನಾವು ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟುಕೊಂಡವರು.
ಕರ್ನಾಟಕ, ಸಿದ್ದರಾಮಯ್ಯ ಬಗ್ಗೆ ಪ್ರಧಾನಿ ಮೋದಿಗೆ ಭಯ.
ಆದ್ದರಿಂದಲೇ ಎಲ್ಲ ಕಡೆ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ.
ನಮ್ಮ ಗ್ಯಾರಂಟಿ ಯೋಜನೆಗಳನ್ನು ಮೋದಿ ವಿರೋಧಿಸಿದ್ದರು.
ಈಗ ಮೋದಿ ಅವರೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದ್ದಾರೆ.
ಇತ್ತೀಚೆಗೆ ವಿಕಸಿತ ಭಾರತ್ ಯಾತ್ರೆ ಶುರು ಮಾಡಿದ್ದಾರೆ.
ಅದರಲ್ಲಿ ಪ್ರಧಾನ ಮಂತ್ರಿಗಳ ಗ್ಯಾರಂಟಿ ಯೋಜನೆ ಅಂತ ಬೋರ್ಡ್ ಹಾಕಿದ್ದಾರೆ.
ಪ್ರಧಾನಿ ಯಾರು ನರೇಂದ್ರ ಮೋದಿ ಅಲ್ವಾ ?
ಇದನ್ನೇ ರಾಜಕೀಯ ಇಬ್ಬಂದಿತನ ಅನ್ನೋದು ಎಂದು
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು