ಮೈಸೂರು : ವಿಡಿಯೋ ವೈರಲ್ ಬಗ್ಗೆ ಮೊದಲ ಬಾರಿಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು
ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ.ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು ಎಂದರು.
ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ.
ನಾನು ಅವತ್ತು ಮಾತನಾಡಿರುವುದು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ಯಾಕೆ ತೆಗೆದುಕೊಂಡು ಹೋಗುತ್ತಾರೆ.
ಇವರ ಅವಧಿಯಲ್ಲಿ ಲಿಸ್ಟ್ ಅಂದರೇ ವರ್ಗಾವಣೆ ಅಂದರೇ ಅದು ದಂಧೆಯಾಗಿತ್ತಾ?ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ.
ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ?ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ?
ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ?
ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ.
ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರು ಅದರಲ್ಲಿ ತಪ್ಪೇನಿದೆ.ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೇ ಇವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ವಾ.
ಆರೋಪಗಳನ್ನ ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ.ದಾಖಲೆ ಇಲ್ಲದೆ ಸುಖಾಸುಮ್ಮನೆ ಆರೋಪ ಮಾಡಬೇಡಿ.ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ.ಅನಗತ್ಯವಾಗಿ ಎಲ್ಲಾ ವಿಚಾರವಾಗಿ ನನ್ನ ಹೆಸರನ್ನ ಡ್ರ್ಯಾಗ್ ಮಾಡಬೇಡಿ ಎಂದು
ಸಿಎಂ ಪುತ್ರ ಡಾ.ಯತೀಂದ್ರ ಹೇಳಿದರು