ಮೈಸೂರು : ಪ್ರತಿಪಕ್ಷ ನಾಯಕನಾಗಿ ಅಶೋಕ್ ನೇಮಕ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ವಿಪಕ್ಷರಾದರೆ ಅದಕ್ಕೆ ನಾನೇನು ಮಾಡಲಿ.
ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.
ನಾವು ಜನರಿಗೆ ಕೊಟ್ಟಿರುವ ಆಶ್ವಾಶನೆಗಳಿವೆ.
ನಮ್ಮ ಉದ್ದೇಶ ರಾಜ್ಯದಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಬೇಕು.
ದ್ವೇಷದ ರಾಜಕಾರಣ ನಿಲ್ಲಬೇಕು.
ನಾವು ಎಲ್ಲಾ ಆಶ್ವಾಸನೆಗಳನ್ನ ಈಡೇರಿಸಬೇಕು.
ಅವರು ಯಾರನ್ನಾದರೂ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದರು.
ರಾಜ್ಯದಲ್ಲಿ ಟ್ರಾನ್ಸ್ಫರ್ ದಂಧೆ ವಿಚಾರಕ್ಕೆ ಉತ್ತರಿಸಿದ ಸಿಎಂ ಅವರು ಹೇಳಿದ್ದನ್ನೆಲ್ಲ ನಾವು ಕೇಳಬೇಕೆಂಬುದಲ್ಲ.
ಅಸೆಂಬ್ಲಿಯಲ್ಲಿ ಇದಕ್ಕೆಲ್ಲ ಉತ್ತರ ನೀಡಬೇಕು
ಅಲ್ಲಿಯೇ ಅವರಿಗೆ ಉತ್ತರ ನೀಡ್ತೀವಿ.
ವಿಡಿಯೋದಲ್ಲಿ ಮಾತನಾಡಿರುವ ವಿವೇಕಾನಂದ ಬಗ್ಗೆ ಗೊತ್ತಾ?ವಿವೇಕಾನಂದ ಮೈಸೂರು ತಾಲೂಕು ಬಿಇಒ.
ಬಿಇಒ ವಿವೇಕಾನಂದರ ಬಗ್ಗೆ ವಿಡಿಯೋದಲ್ಲಿ ಮಾತನಾಡಿರುವುದು.ಇನ್ಸ್ ಪೆಕ್ಟರ್ ವಿವೇಕಾನಂದ ಟ್ರಾನ್ಸ್ ಫರ್ ಆಗಿರುವುದು ಚಾಮರಾಜ ಕ್ಷೇತ್ರಕ್ಕೆ ಎಂದು ಹೇಳಿದರು
ಚಿಕ್ಕಮಗಳೂರಲ್ಲಿ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಚಳವಳಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಜನ ಈಗಾಗಲೇ ಅವರಿಗೆ ಪಾಠ ಕಲಿಸಿದ್ದಾರೆ. ವಿಪಕ್ಷ ಸ್ಥಾನದಲ್ಲಿ ಕೂತುಕೊಳ್ಳಿ ಅಂತ ಕೂರಿಸಿಸ್ದಾರೆ.
ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದೇ ಬರ್ತೀವಿ ಅಂತಿದ್ರು. ಸಮ್ಮಿಶ್ರ ಸರ್ಕಾರ ನಡೆಸಲು ಚಿಂತನೆಯಲ್ಲಿದ್ದರು.ಸದ್ಯ ಅಧಿಕಾರಕ್ಕೆ ಬರದೇ ಇರುವುದಕ್ಕೆ ಡೆಸ್ಪರೇಟ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು