ದೆಹಲಿ: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ ಆಗುತ್ತಲೇ ಇದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ನೀರು ಹರಿಸಲು ಸೂಚನೆ ನೀಡಿದ್ದು ಕರ್ನಾಟಕಕ್ಕೆ ಆಘಾತ ಎದುರಾಗಿದೆ.