ಮೈಸೂರು : ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತಾಶ್ರಯದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಲೋಕನಾಥ್ ಉದ್ಘಾಟನೆ ಮಾಡಿದರು.
ಈ ವೇಳೆ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಅಪರ ಜಿಲ್ಲಾಧಿಕಾರಿ ಲೋಕನಾಥ್ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಯುವಸಬಲೀಕರಣ ಜಂಟಿ ನಿರ್ದೇಶಕ ಭಾಸ್ಕರ್ ನಾಯಕ್ ಸೇರಿದಂತೆ ತೀರ್ಪುಗಾರರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಜನರಿಲ್ಲದೆ ಖಾಲಿ ಕುರ್ಚಿಗಳ ದರ್ಬಾರ್
ತಾಲೂಕು ಮಟ್ಟಕ್ಕೆ ಯುವಜನೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡುವಲ್ಲಿ ಜಿಲ್ಲಾಡಳಿತ ಎಡವಿದ್ದು, ಎರಡು ದಿನ ಬಾಕಿಯಿರುವಾಗ ನಮಗೆ ಈ ಕಾರ್ಯಕ್ರಮದ ಬಗ್ಗೆ ತಿಳಿಯಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಸಂಭ್ರಮ ಸಡಗರದಿಂದ ನಡೆಯಬೇಕಿದ್ದ ಕಾರ್ಯಕ್ರಮ ಕಾಟಾಚಾರಕ್ಕೆ ನಡೆಸಿದಂತೆ ಕಾಣಿಸಿತು. ಜನರಿಗಿಂತ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳೆ ಹೆಚ್ಚು ಕಾಣ ಸಿಗುತ್ತಿತ್ತು.