ತುಮಕೂರು : ಸೋಮಣ್ಣ ಅವರಿಗೆ ಎರಡು ಕಡೆ ಸ್ಪರ್ಧಿಸಿ ಎಂದು ಹೇಳಿದ್ದು ಹೈಕಮಾಂಡ್. ಯಡಿಯೂರಪ್ಪ ಅಲ್ಲ. ಸಿದ್ದರಾಮಯ್ಯ ವಿರುದ್ದ ಗೆದ್ದರೆ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಸೋಮಣ್ಣ ಅವರಿಗೆ ಎರಡು ಕಡೆ ಸ್ಪರ್ಧಿಸಿ ಎಂದು ಹೇಳಿದ್ದು ಹೈಕಮಾಂಡ್. ಯಡಿಯೂರಪ್ಪ ಅಲ್ಲ. ಸಿದ್ದರಾಮಯ್ಯ ವಿರುದ್ದ ಗೆದ್ದರೆ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸೋಮಣ್ಣ ದೆಹಲಿಗೆ ಹೋಗಿ ವರಿಷ್ಠರ ಜತೆ ಚರ್ಚೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ.
ಆದರೆ, ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಸೋಮಣ್ಣರಿಗಿಲ್ಲ. ಬಿಜೆಪಿಯಲ್ಲಿ ಅನ್ಯಾಯವಾಗಿದೆ, ನಾನು ಕಾಂಗ್ರೆಸ್ನಲ್ಲಿದ್ದರೆ ಮಂತ್ರಿಯಾಗಿರುತ್ತಿದ್ದೆ ಎಂದು ಕೆಲವರ ಬಳಿ ಸೋಮಣ್ಣ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ನವರು ಇವರಿಗೆ ಹಿಂದೆ ಏನು ಸ್ಥಾನಮಾನ ಕೊಟ್ಟಿದ್ದರು? ನೀವು ಸೋತು ಎಲ್ಲೋ ಇದ್ದಾಗ, ನಿಮ್ಮ ಕಣ್ಣೀರು ಒರೆಸಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಕೇಳಿದ ಖಾತೆ ಕೊಟ್ಟಿದ್ದು ಯಡಿಯೂರಪ್ಪ ಮಾಡಿದ ಅಪರಾಧವೇ? ಎಂದು ಪ್ರಶ್ನಿಸಿದರು.