ಮೈಸೂರು : ಮೈಸೂರಿನ ಬಸವನಗುಡಿಯಲ್ಲಿರುವ ಅಣ್ಣಯ್ಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ಶ್ರೀಭೈರವೇಶ್ವರ ಶಾಲೆ ಮತ್ತು ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವವನ್ನು ಡಿ.೪ರಂದು ಮಧ್ಯಾಹ್ನ ೨ಗಂಟೆಗೆ ನಗರದ ಕಲಾಮಂದಿರದಲ್ಲಿ ಅಯೋಜಿಸಲಾಗಿದೆ ಎಂದು ಸಂಸ್ಥೆ ನಿರ್ದೇಶಕಿ ಮತ್ತು ಕಾಲೇಜಿನ ಪ್ರಾಂಶುಪಾಲರೂ ಆದ ಎಸ್.ಸೌಮ್ಯ ಅವರು ತಿಳಿಸಿದರು.
ಅಂದಿನ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಸಂಚಿಕೆಯನ್ನು ಸುತ್ತೂರುಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಬಿಡುಗಡೆಗೊಳ್ಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರ ಸ್ವಾಮೀಜಿ, ಯೋಗನರಸಿಂಹ ಸ್ವಾಮಿ ದೇವಾಲಯದ ಡಾ.ಭಾಷ್ಯಂ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುತ್ತದೆ. ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಂತರ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಸುಬ್ಬೇಗೌಡ ಮಾತನಾಡಿ, ಕಳೆದ ೩೫ ವರ್ಷಗಳಿಂದ ಸಂಸ್ಥೆಯೂ ಯಾವುದೇ ಡೋನೇಷಮ್ ಪಡೆಯದೇ ಶಾಲೆ ನಡೆಸಲಾಗುತ್ತಿದ್ದು, ಹಾಗೇ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ವಂಚಿತರಾಗದಂತೆ ಗುಣಮಟ್ಟ ಶಿಕ್ಷಣ ನೀಡಲಾಗುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್.ಪಂಚಾಕ್ಷರಿ, ಕಾಮಾಕ್ಷಿ, ಪುರುಷೋತ್ತಮ್, ಭರತ್, ಬಸವರಾಜ್ ಉಪಸ್ಥಿತರಿದ್ದರು.