ಬೆಳಗಾವಿ : ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಹಿನ್ನಲೆ ಕಲಾಪಕ್ಕೆ ಭಾಗಿಯಾಗುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಇವತ್ತಿನಿಂದ ಅಧಿವೇಶನ ಆರಂಭವಾಗುತ್ತದೆ.
ಕೆಲವು ಬಿಲ್ಗಳಿದಾವೆ,ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ನಾವು ಸಿದ್ದರಿದ್ದೇವೆ.ಹೆಚ್ಚಾಗಿ ಉತ್ತರ ಕರ್ನಾಟಕದ ಕಡೆ ಹೆಚ್ಚು ಸಮಸ್ಯೆಗಳಿವೆ.ಅದರ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕಾಗಿದೆ ಎಂದರು. ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿಗಳ ಕೆಲಸ ಮಾಡಲಿಲ್ಲ ಎಂಬ ಪ್ರಶ್ನೆಗೆ ಸಿಎಂ ಪ್ರತಿಕ್ರಿಯಿಸಿ, ಗ್ಯಾರಂಟಿ ಕೆಲಸ ಮಾಡದೇ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತಾ.?
ಮಧ್ಯ ಪ್ರದೇಶದಲ್ಲಿ ಬಿಜೆಪಿ ಅವ್ರು ಗ್ಯಾರಂಟಿ ಘೋಷಣೆ ಮಾಡಿರಲಿಲ್ವಾ.?ನಾವು ಚುನಾವಣೆಯಲ್ಲಿ ಗೆಲ್ಲಲೇ ಬೇಕು ಅಂತಲ್ಲ ಎಲ್ಲಾ ವರ್ಗದ ಬಡ ಜನರಿಗೆ ಶಕ್ತಿ ತುಂಬಲು ಈ ಕಾರ್ಯಕ್ರಮಗಳನ್ನು ಕೊಟ್ಟಿದ್ದೀವಿ ಇವೆಲ್ಲ ಬಡವರ ಕಾರ್ಯಕ್ರಮಗಳು.ಅದಕ್ಕೆ ಗ್ಯಾರಂಟಿ ಅಂತ ಹೆಸರಿಟ್ಟಿದ್ದೇವೆ.ಬಿಜೆಪಿಯವರು ನಮ್ಮ ಬಗ್ಗೆ ಮಾತಾಡಲಿಕ್ಕೆ ನೈತಿಕತೆಯ ಇಲ್ಲ ಎಂದು ಹೇಳಿದರು.