ಮೈಸೂರು : ಭ್ರೂಣ ಪತ್ತೆ ಹತ್ಯೆ ಪ್ರಕರಣ ಸಂಭಂದಿಸಿದಂತೆ ಮೈಸೂರಿನಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
ವೈದ್ಯಕೀಯ ಪ್ರಮಾಣ ಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ
ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಬೀಗ ಬಿದ್ದಿದೆ.
ಮೈಸೂರು ಜಿಲ್ಲೆಯಾದ್ಯಂತ ಮುಂದುವರಿದ ಕಾರ್ಯಾಚರಣೆ ನಡೆಸುತ್ತಿದ್ದು ಜಿಲ್ಲಾ ಟಾಸ್ಕ್‌ಪೋರ್ಸ್ ತಂಡದಿಂದ ಪರಿಶೀಲನೆ ಮಾಡಲಾಗುತ್ತಿದೆ.
ಮೈಸೂರು ನಗರದ ವಿವಿಧ ಭಾಗಗಳ ನರ್ಸಿಂಗ್ ಹೋಂ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಪರಿಶೀಲನೆ ಮಾಡಿ
ಸಮರ್ಪಕ ದಾಖಲಾತಿ ಇಲ್ಲದ ಕ್ಲಿನಿಕ್‌ಗಳಿಗೆ ನೋಟಿಸ್ ನೀಡಲಾಗುತ್ತಿದೆ.