ಮೈಸೂರು : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು
ಮಹಿಳೆಯರಿಗೆ ರಕ್ಷಣೆ ಕೊಡದ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಅಲ್ಲದೆ ಈ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಇದೊಂದು ಮಹಿಳಾ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು. ಅಲ್ಲದೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಲ್ ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರೂ ಭಾಗಿಯಾಗಿದ್ದರು.