ಮೈಸೂರು : ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ಮಾಡಿರುವುದನ್ನು ಬಿಜೆಪಿ ಎಂಎಲ್ಸಿ ಅಡಗೂರು ಎಚ್.ವಿಶ್ವನಾಥ್ ಖಂಡನೆ ಮಾಡಿದ್ದಾರೆ.
ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು ಅಮಾನತು ಮಾಡಲಾಗಿದೆ.ನುಸುಳುಕೋರರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಸಂಸತ್ತು ಇರೋದೇ ಚರ್ಚೆ ಮಾಡೋದಕ್ಕೆ.ಮಾತನಾಡುವುದೇ ಬೇಡ ಎಂದರೆ ಹೇಗೆ ಎಂದು ಸ್ವಪಕ್ಷದ ವಿರುದ್ಧ ಟೀಕೆ ಗುಡುಗಿದರು.
ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಾರೆ.
ಅದೆಲ್ಲದಕ್ಕೂ ಆಡಳಿತ ಪಕ್ಷ ಉತ್ತರ ಕೊಡಬೇಕು.
ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ.
ಶೇ.40ರಷ್ಟು ಅಧಿಕಾರಿಗಳೇ ಇಲ್ಲ.ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ.
ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ.ಪ್ರಪಂಚದ ಮುಂದೆ ಭಾರತ ಬೆತ್ತಲಾಗುತ್ತಿದೆ ಎಂದು ಹೇಳಿದರು
ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿಯಾದ್ರೆ ಒಳ್ಳೇದು
ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿವೆ.ಇದನ್ನು ನಾನು ಸ್ವಾಗತ ಮಾಡುತ್ತೇನೆ. ರಾಜ್ಯದ ದೇವೇಗೌಡರು ಪ್ರಧಾನಿ ಆಗಿದ್ದರು.ಖರ್ಗೆ ಅವರ ಮೂಲಕ ಇನ್ನೊಂದು ಅವಕಾಶ ಸಿಕ್ಕಿದೆ.ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯರಲ್ಲ.
ಕಾರ್ಮಿಕನ ಮಗನಾಗಿ ಹುಟ್ಟಿ ಕೇಂದ್ರದಲ್ಲಿ ಕಾರ್ಮಿಕ ಸಚಿವರಾಗಿ ಬೆಳೆದವರು.ಶೋಷಿತ ಸಮುದಾಯಗಳಿಂದ ಬಂದವರು.ಶಾಸಕರು, ಸಚಿವರು, ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾದೆ.ಖರ್ಗೆ ಪ್ರಧಾನಿಯಾದರೆ ದೇಶ ಸಂತೋಷ ಪಡುತ್ತದೆ. ಪ್ರಧಾನಿಯಾಗಲಿ ಎಂದು ಬಯಸುವ ಪ್ರಜಾತಂತ್ರ ಪರವಾದ ಜನರಲ್ಲಿ ನಾನೂ ಒಬ್ಬ.
ಎಚ್.ವಿಶ್ವನಾಥ್ ಹೇಳಿದರು