– ಬಾವಲಿ ಚೆಕ್ ಪೋಸ್ಟ್ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಮೈಸೂರು : ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಪ್ರಕರಣ ವರದಿಯಾದ ಹಿನ್ನೆಲೆ ಹೆಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಬಿಂದಾಸ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಉಪಸ್ಥಿತರಿದ್ದರು.