ಚಾಮರಾಜನಗರ : ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಕಬ್ಬು ಬೆಳೆಗಾರರು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದ ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಜಿಲ್ಲಾಡಳಿತ ಮುಂಭಾಗ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಭಾವಚಿತ್ರ ಹಿಡಿದು ದಹಿಸಲು ಮುಂದಾಗ ಪೊಲೀಸರು ಅಡ್ಡಿ ಪಡಿಸಲು ಮುಂದಾದರು.
ಪೊಲೀಸರು ಮತ್ತು ಪ್ರತಿಭಟನಾ ರೈತರ ನಡುವೆ ಮಾತಿನ ಚಕಮಕಿ ನಡೆದವು. ಕೊನೆಗೆ ರೈತರು ರೈತ ವಿರೋಧಿ ಸಚಿವ ಶಿವಾನಂದ್ ಪಾಟೀಲ್ ಭಾವಚಿತ್ರವನ್ನು ಹರಿದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.