ಮೈಸೂರು : ಮೈಸೂರು ಜಿಲ್ಲೆಯಲ್ಲಿ ನಾಲ್ಕು ಜೆಎನ್.1 ಸೋಂಕು ಪತ್ತೆಯಾಗಿದ್ದು, ಇಬ್ಬರು ಅಮೆರಿಕಾದಿಂದ ಬಂದವರು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಾಲ್ವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಲಾಗಿದೆ. ಅಮೆರಿಕಾದಿಂದ ಬಂದವರ ಸಂಪರ್ಕಿತರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಮನವಿ ಮಾಡಿದ್ದಾರೆ