ಮೈಸೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ 1860 ರ IPC 504 , 153ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ್ದ ಪ್ರತಾಪ್ ಸಿಂಹ ವಿರುದ್ಧ
ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ನಿನ್ನೆ ಪ್ರತಾಪ್ ಸಿಂಹ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು.
ತಡರಾತ್ರಿ ಸಂಸದರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪಟ್ಟು ಹಿಡಿದು ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಕೈ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು
ಸಂಸದ ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿ ರಸ್ತೆಯಲ್ಲಿ ಮಲಗಿ ಆಕ್ರೋಶ ಎಫ್ ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದಿದ್ದ ಕೈ ಮುಖಂಡರು.
ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಧ್ವೇಷ ಹರಡುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಪ್ರತಾಪ್ ಸಿಂಹ.
ಹಿಂದು ಮತ್ತು ಮುಸ್ಲೀಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಎಂದು ಲಿಖಿತ ದೂರು ನೀಡಿದ ಗ್ರಾಮಾಂತರ ಅಧ್ಯಕ್ಷ ಬಿ.ಜೆ ವಿಜಯಕುಮಾರ್.
ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು.