ಕಲಬುರ್ಗಿ : ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ
ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಅವರು ತಿಳಿಸಿದರು
ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.
ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿ ಕಾನೂನು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಯಾರಿಗೆ ನೋಟಿಸ್ ನೀಡಬೇಕು, ಯಾವ ರೀತಿ ವಿಚಾರಣೆ ನಡೆಸಬೇಕೆಂಬುದನ್ನು ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ತಮ್ಮ ಹೇಳಿಕೆಗಳಿಂದಲೇ ಸದಾ ಸದ್ದು ಮಾಡುವ ಯತ್ನಾಳ್ ಇದೀಗ ಸ್ವಪಕ್ಷದವರ ಮೇಲೆಯೇ ವಾಗ್ದಾಳಿ ಮಾಡುತ್ತಿದ್ದು ಯತ್ನಾಳ್ ಹೇಳಿಕೆ ಇಟ್ಟುಕೊಂಡು ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ