ಮೈಸೂರು : ಮುಸ್ಲಿಂ ಮಹಿಳೆಯರ ಮೇಲೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಹಾಗೂ ಸ್ವತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ರನ್ನು ಬ್ರಿಟಿಷ್ ರ ಬೂಟು ನೆಕ್ಕುತ್ತಿದ್ದ ಎಂದು ಹೇಳಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮೇಲೆ ನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೈಸೂರು ನಗರ ಪೊಲೀಸ್ ಆಯಕ್ತರಿಗೆ ದೂರು ನೀಡಲಾಗಿದೆ
ಆರ್.ಎಸ್.ಎಸ್ ಕಲ್ಲಡ್ಕ ಪ್ರಭಾಕರ್ ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಮೇಲೆ ಹಗುರವಾಗಿ ಮಾತನಾಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಗರ ಜಿಲ್ಲಾ ಕಾಂಗ್ರೆಸ್ ಸದಸ್ಯರು ಡಿಸಿಪಿ ದೂರು ಸಲ್ಲಿಸಿದ್ದಾರೆ. ಡಿಸಿಪಿ ಮುತ್ತುರಾಜ್ ಕಾನೂನು ರೀತಿಯ ಕ್ರಮ ಜರುಗಿಸುವ ಭರವಸೆಯನ್ನು ಕಾಂಗ್ರೆಸ್ ಸದಸ್ಯರಿಗೆ ನೀಡಿದ್ದಾರೆ