“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು
ಮೈಸೂರಿನ ಬಾಲರಾಮನು ಬೆಳಗುವನು”
ಮೈಸೂರು : ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ, ಕರುನಾಡ ಹೆಮ್ಮೆಯಾಗಿದೆ ಎಂದು ವಿಜಯೇಂದ್ರ ಹೇಳಿದರು
ರಾಮನ ಭಂಟ ಹನುಮಂತನು ಹುಟ್ಟಿರುವ ನಮ್ಮ ಕನ್ನಡನಾಡಿನಲ್ಲಿ, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅದೇ ರೀತಿ ಶ್ರೀರಾಮನ ವಿಗ್ರಹವೂ ಕರ್ನಾಟಕದ ಶಿಲ್ಪಿಯಿಂದಲೇ ಕೆತ್ತನೆಯಾಗಿರುವುದು ಭಾವನಾತ್ಮಕ ಭಕ್ತಿ ತರಿಸಿದೆ.
ಅಂತರಾಷ್ಟ್ರೀಯ ಗಮನ ಸೆಳೆದ ಕೇದಾರನಾಥದ ಆದಿ ಶಂಕರಚಾರ್ಯ, ದೆಹಲಿಯ ಇಂಡಿಯಾ ಗೇಟ್ ಬಳಿಯ ಸುಭಾಷ್ ಚಂದ್ರ ಬೋಸ್, ಇದೀಗ ವಿಶ್ವ ಹಿಂದೂಗಳ ಹೃದಯದಲ್ಲಿ ನೆಲೆಸಲಿರುವ ಅಯೋಧ್ಯೆಯ ಬಾಲ ರಾಮನ ಮೂರ್ತಿಯ ವಿಗ್ರಹ ರೂಪಿಸಿ, ರಾಜ್ಯಕ್ಕೆ ಶ್ರೇಷ್ಠ ಕೀರ್ತಿ ತಂದ ಶಿಲ್ಪಿ ಶ್ರೀ Arun Yogiraj ಹಾಗೂ ಈ ಕಾರ್ಯದಲ್ಲಿ ಹೆಗಲುಕೊಟ್ಟ ಅವರ ತಂಡದವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ಹರ್ಷ ವ್ಯಕ್ತಪಡಸಿದ್ದಾರೆ