ಚಾಮರಾಜನಗರ: ಹೊಸ ವರ್ಷದ ಮೊದಲನೇ ದಿನವಾದ ಸೋಮವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭೇಟಿ ನೀಡಿದ್ದಾರೆ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರವರು ಸೋಮವಾರ ಸಂಜೆ ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ತೆರಳಿ ರಾತ್ರಿ ಜಿಲ್ಲಾಧಿಕಾರಿ ಶಿಲ್ಪನಾಗ್, ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್ ರವರೊಂದಿಗೆ ಪವಾಡ ಪುರುಷ ಮಲೆ ಮಹದೇಶ್ವರ ದರ್ಶನ ಪಡೆದರು.
ಬಳಿಕ ದೇವಾಲಯದ ಆವರಣದಲ್ಲಿರುವ ಕಛೇರಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಹೊರತಂದಿರುವ 2024 ರ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿದರು.