ದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ ಬಳಿಕ ಈ ಘೋಷಣೆಗಳನ್ನು ಅಂತಿಮಗೊಳಿಸಲಾಯಿತು. ಸಭೆಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಉಪಸ್ಥಿತರಿದ್ದರು
ಕಳೆದ ಎರಡು ಬಾರಿ ಭರ್ಜರಿಯಾಗಿ ಗೆದ್ದು ಬಿಗಿದ್ದ ಬಿಜೆಪಿಗೆ ಈ ಬಾರಿ ಇಂಡಿಯಾ ಬಣ ಸೋಲಿನ ರುಚಿ ತೋರಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಮಲ್ಲಿಕಾರ್ಜುನ್ ಖರ್ಗೆ ಹೆಸರನ್ನು ಪ್ರಧಾನಿ ಹುದ್ದೆಗೆ ತೇಲಿ ಬಿಡುವ ಮೂಲಕ ಮಮತಾ ಬ್ಯಾನರ್ಜಿ ಹೊಸ ದಾಳ ಉರುಳಿಸಲು ಮುಂದಾಗಿದ್ದು ಮುಂಬರುವ ಲೋಕಸಭೆ ರೋಚಕತೆಯಿಂದ ಕೂಡಿದೆ.