ಮೈಸೂರು : ತರೀಕೆರೆ ತಾಲ್ಲೂಕಿನ ಗೇರಮರಡಿ ಪ್ರದೇಶದಲ್ಲಿ ಜರುಗಿರುವ ಅಸ್ಪೃಶ್ಯತಾ ಆಚರಣೆಯ ಘಟನೆಯು ಎಂದಿನಂತೆಯೇ ಸಂವಿಧಾನ ಮತ್ತು ಸ್ವಾತಂತ್ರ್ಯದ ಆಶಯಗಳಾ ಸಮಾನತೆ ಮತ್ತು ಭ್ರಾತೃತತ್ವದ ಅಂಶಗಳಿಗೆ ವಿರುದ್ಧವಾದ ಸಂಗತಿಯಾಗಿದೆ ಎಂದು ಹೆಚ್.ಸಿ ಮಹದೇವಪ್ಪ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಶೂಗಳನ್ನೇ ಕೊಂಡುಕೊಳ್ಳಲು ಸಾಧ್ಯವಿಲ್ಲದ ಸ್ಥಿತಿಯನ್ನು ಎದುರಿಸುತ್ತಿರುವ ಬಡ ವರ್ಗದ ಜನರು ಇರುವ ಸಮುದಾಯಗಳಲ್ಲೇ ಶಾಲಾ ಶೂಗಳನ್ನು ಧರಿಸಿ ನಡೆಯುವುದು ಮೈಲಿಗೆಗೆ ಕಾರಣವಾಗುತ್ತದೆ ಎಂಬ ಸಂಗತಿಯು ತಲೆ ತಗ್ಗಿಸುವಂತದ್ದು.ಇದೇ ರೀತಿಯಲ್ಲಿ ಮೈಸೂರು ತಾಲ್ಲೂಕಿನ ಕೆಂಚಲಗೂಡು ಗ್ರಾಮದ ವ್ಯಾಪ್ತಿಯಲ್ಲೂ ದಲಿತರು ದೇವಸ್ಥಾನ ಪ್ರವೇಶ ಮಾಡುತ್ತಾರೆಂದು ಪ್ರತ್ಯೇಕ ದೇವಸ್ಥಾನ ನಿರ್ಮಾಣ ಮಾಡುವ ಮನಸ್ಥಿತಿಯನ್ನು ಕಂಡೂ ನನ್ನ ಮನಸ್ಸು ಘಾಸಿಗೊಂಡಿದೆ ಎಂದು ಹೇಳಿದ್ದಾರೆ
ಬಾಬಾ ಸಾಹೇಬರು ಹೇಳಿದಂತೆ ನಮ್ಮ ಜನರು ಅದರಲ್ಲೂ ಮುಖ್ಯವಾಗಿ ಯುವಕರು ಮೌಢ್ಯತೆಯಿಂದ ಹೊರಬಂದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಶಿಕ್ಷಣವನ್ನು ಪಡೆದು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುವತ್ತ ಗಮನಹರಿಸಬೇಕು.ಇಲ್ಲದೇ ಹೋದರೆ ಹಲವಾರು ತ್ಯಾಗ ಬಲಿದಾನಗಳಿಂದ ರೂಪುಗೊಂಡ ಸಂವಿಧಾನದ ಆಶಯಗಳು ನಾಶವಾಗುತ್ತವೆ ಎಂದಿದ್ದಾರೆ
ಯಾವ ಮನುವಾದಿ ಮಾದರಿಯ ಮಾರ್ಗವನ್ನು ನಮ್ಮ ಕೆಳವರ್ಗದ ಜನರು ಹಿಡಿಯಬಾರದೆಂದು ಬಾಬಾ ಸಾಹೇಬರು ಬಯಸಿದ್ದರೋ ಅದೇ ಮಾರ್ಗವನ್ನೇ ಕೆಲವರು ಹಿಡಿದಿರುವುದು ಅತ್ಯಂತ ಶೋಚನೀಯ ಮತ್ತು ಬೇಸರದ ಸಂಗತಿಯಾಗಿದೆ.ಇನ್ನು ಮುಂದೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇಂತಹ ಅಸ್ಪೃಶ್ಯತಾ ಆಚರಣೆ ಘಟನೆಗಳು ತಲೆದೋರದಂತೆ ನಮ್ಮ ಅಧಿಕಾರಿ ವರ್ಗವು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು, ಸರ್ಕಾರವೂ ಈ ಕುರಿತಂತೆ ಅಗತ್ಯವಾದ ಸಂವಿಧಾನಿಮ ಅರಿವು ಮೂಡಿಸುವ ಕೆಲಸ ಮಾಡಲಿದೆ ಎಂದು ಈ ಮೂಲಕ ಅಧಿಕಾರಿಗಳಿಗೆ ಸೂಚಿಸುತ್ತೇನೆ ಮತ್ತು ಸಮಾನ ಸಮಾಜದತ ನಿರ್ಮಾಣದ ಆಶಯವನ್ನು ವ್ಯಕ್ತಪಡಿಸಿದ್ದಾರೆ