ಮೈಸೂರು : ಒನ್ ನೇಷನ್, ಒನ್ ಎಲೆಕ್ಷನ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,
ಅದು ಪ್ರಾಕ್ಟಿಕಲ್ಲಾಗಿ ಸಾಧ್ಯನಾ ಅನ್ನೋದನ್ನ ನೋಡ್ಬೇಕು.
ಸಂವಿಧಾನದ ಪರವಾಗಿರುತ್ತಾ ಅನ್ನೋದು ಮುಖ್ಯ.
ಸಂವಿಧಾನ ರಕ್ಷಣೆ ಆದ್ರೆ ಒಳಿತು. ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಆಗ್ತಿದೆ.ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಇದನ್ನೆಲ್ಲಾ ಯುವಕರು ಗಮನಿಸಬೇಕಾಗುತ್ತದೆ ಎಂದರು.
ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲು ವಿಚಾರಕ್ಕೆ ಮಾತನಾಡಿದ ಸಿಎಂ, ಎಫ್ಐಆರ್ ಹಾಕೋದು ತಪ್ಪು ಮಾಡಿದಾಗ.ರಾಹುಲ್ ಗಾಂಧಿಯವರ ಪಾದಯಾತ್ರೆಯನ್ನ ನಿಷ್ಕ್ರಿಯ ಮಾಡುವಂತ ಕೆಲಸ ಆಗಿದೆ. ರಾಹುಲ್ ಗಾಂಧಿ ಇದಕ್ಕೆಲ್ಲಾ ಕೇರ್ ಮಾಡಲ್ಲ.ಉದ್ದೇಶಪೂರ್ವಕವಾಗಿ ಎಫ್ಐಆರ್ ದಾಖಲು ಮಾಡಿದ್ದಾರೆ
ಇದನ್ನ ನಾನು ಖಂಡಿಸುತ್ತೇನೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ತಡೆಯನ್ನ ಖಂಡಿಸುತ್ತೇನೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಜ.26ರಂದು ಸಂವಿಧಾನ ಜಾಗೃತಿ ದಿನ.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಜಾಗೃತಿ ದಿನ ಆರಂಭ.
ಫೆ. 24 ರವರೆಗೆ ಈ ಜಾಗೃತಿ ಅಭಿಯಾನ ನಡೆಯುತ್ತದೆ.
ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನದ ವಿರುದ್ಧವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಭಾರತದ ಸಂವಿಧಾನ ಫ್ಲೆಕ್ಸಿಬಲ್ ಆಗಿದೆ.ಅಗತ್ಯಕ್ಕೆ ತಕ್ಕಂತೆ ಕೆಲವು ತಿದ್ದುಪಡಿಗಳು ಆಗಿವೆ.ಸಂವಿಧಾನದ ಮೇಲೆ ಗೌರವ ಇಲ್ಲದ ನಡವಳಿಕೆಗಳು ಇತ್ತೀಚೆಗೆ ಕಾಣುತ್ತಿದ್ದೇವೆ ಸಿದ್ದರಾಮಯ್ಯ ಹೇಳಿದರು.
ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದೆ
ಹೈಕಮಾಂಡ್ ನಿಗಮ ಮಂಡಳಿಗಳ ಪಟ್ಟಿಗೆ ಒಪ್ಪಿಗೆ ನೀಡಿದ ನಂತರ ಬಿಡುಗಡೆ ಮಾಡುತ್ತೇವೆ ಎನ್ನುವ ಮೂಲಕ
ನಿಗಮ ಮಂಡಳಿಗಳ ಪಟ್ಟಿ ಹೈಕಮಾಂಡ್ ಬಳಿ ಇದೆ ಎಂಬುದನ್ನ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.