ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ತವರು ಪಕ್ಷ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರನ್ನ ಭೇಟಿಯಾಗಿದ್ದ ಜಗದೀಶ್ ಶೆಟ್ಟರ್ ಮಹತ್ವದ ಮಾತುಕತೆ ನಡೆಸಿದ್ರು. ಅಂತಿಮವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನ್ ಸಿಕ್ಕಿತ್ತು. ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನೆಡೆ ಆಗದಂತೆ ತಡೆಯಲು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸೆಳೆಯಲು ಯತ್ನ ನಡೆದಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದ ಆಪರೇಷನ್ ಹಸ್ತಕ್ಕೆ ರಿವರ್ಸ್ ಆಪರೇಷನ್ ನಡೆದಿರುವ ಸುಳಿವು ಸಿಕ್ಕಿದೆ.ಮುಂದಿನ ದಿನದಲ್ಲಿ ಕಾಂಗ್ರೆಸ್ನ ಮತ್ತಷ್ಟು ವಿಕೆಟ್ ಪತನವಾಗೋ ನಿರೀಕ್ಷೆ ಇದೆ.