ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದು ಈ ಮಧ್ಯೆಯೇ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನ ಮತ್ತೊಮ್ಮೆ ಗೆಲ್ಲಿಸಿ ಎಂದು ಕರೆ ನೀಡಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ
ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ. ಬಿವೈ ರಾಘವೇಂದ್ರ ಉತ್ತಮ ಕೆಲಸ ಮಾಡಿದ್ದಾರ. ಜಿಲ್ಲೆ ಅಭಿವೃದ್ದಿ ಕೆಲಸ ಗಮನಿಸಿ ಮುಂದಿನ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಗೆಲ್ಲಿಸುವಂತೆ ಕರೆ ನೀಡಿದ್ದಾರೆ.
ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದಿದ್ದಾರೆ.
ಶಾಮನೂರು ಶಿವಂಕರಪ್ಪ ಅವರ ಈ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆದ ಬಳಿಕ ಶಿವಶಂಕರಪ್ಪ ಅವರ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ಮತ್ತೊಂದು ಹೊಡೆತ ಎನ್ನಬಹುದು. ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಲೋಕಸಭೆಯಲ್ಲಿ 25 ಸ್ಥಾನಗಳನ್ನು ಗೆಲ್ಲಬೇಕು ಎಂದು ತಂತ್ರಗಳನ್ನು ರೂಪಿಸುತ್ತಿದ್ದು ತಮ್ಮದೇ ಪಕ್ಷದ ಹಿರಿಯ ನಾಯಕರ ಈ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುವುದಲ್ಲಿ ಡೌಟ್ ಇಲ್ಲ ಎನ್ನುವಂತಾಗಿದೆ.