ಮೈಸೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ನಷ್ಟವೇನಿಲ್ಲ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ.ಪಕ್ಷದ ತತ್ವ ಸಿದ್ದಾಂತ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬೆಂಬಲಿಸುವವರು ಪಕ್ಷದಲ್ಲಿರುತ್ತಾರೆ.ಬಡವ ಬಲ್ಲಿದರನ್ನು ಮೇಲೆತ್ತುವ ಯೋಜನೆಗಳನ್ನು ವಿರೋಧಿಸುವವರು ಪಕ್ಷ ಬಿಟ್ಟು ಹೋಗುತ್ತಾರೆ.ಕಾಂಗ್ರೆಸ್ ಪಕ್ಷ ಯಾವುದೇ ನಾಯಕರ ಮೇಲೆ ಕಣ್ಗಾವಲು ಇರಿಸುವುದಿಲ್ಲ.
ಜಗದೀಶ್ ಶೆಟ್ಟರ್ ಪಕ್ಷ ತೊರೆದಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಇಂದಿರಾಗಾಂಧಿ ಕಾಲದಲ್ಲಿ ಏನಾಯಿತು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. 17 ಶಾಸಕರು ಪಕ್ಷ ಬಿಟ್ಟು ಹೋದರೂ ಏನಾಯಿತು, ವಿಧಾನಸಭೆ ಚುನಾವಣೆಯಲ್ಲಿ ನಾವು 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿಲ್ಲವಾ.ಶಾಸಕ ಲಕ್ಷ್ಮಣ್ ಸವದಿ ಒಬ್ಬ ಜಂಟಲ್ ಮೆನ್.ಅವರು ಪಕ್ಷ ಬಿಡುವುದಿಲ್ಲ ಎಂದಿದ್ದಾರೆ.ಅವರ ಮಾತಿಗೆ ಅವರು ಬದ್ದರಾಗಿರುತ್ತಾರೆ ಎಂಬ ನಂಬಿಕೆಯಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು