ಚಾಮರಾಜನಗರ: ಭಾನುವಾರ ರಾತ್ರಿ ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಹಿನ್ನಲೆಯಲ್ಲಿ ಜಿಲ್ಲಾಡಳಿತ ಆಯೋಜಸಿದ್ದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ಧೇಶಕ ಅರ್ಜುನ್ ಜನ್ಯ ಹಾಡಿದ ರಾಮನ ಹಾಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಸಮಧಾನದಿಂದ ಸಭೆಯಿಂದ ಹೊರ ನಡೆದ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ಸುರ್ವಣ ಸಂಭ್ರಮ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಡಳಿತದಿಂದ ಸಂಗೀತೋತ್ಸವ ಆಯೋಜಿಸಲಾಗಿತ್ತು.ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೇತೃತ್ವದಲ್ಲಿ ಸಂಗೀತೋತ್ಸವ ನಡೆಯುತ್ತಿತ್ತು. ಈ ವೇಳೆ ರಾಮನ ಹಾಡು ಹಾಡಿದ್ದಕ್ಕೆ ಅಸಮಾಧಾನದಿಂದ ಸಚಿವ ವೆಂಕಟೇಶ್ ಕಾರ್ಯಕ್ರಮದಿಂದ ಎದ್ದು ಹೊರ ಹೋಗಿದ್ದಾರೆ ಎನ್ನಲಾಗುತ್ತಿದೆ.
ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಜನಪ್ರಿಯ ರಾಮ ನಾಮ ಹಾಡಿರೋ ರಾಮ ಬರುವನು… ಅವನ ಹಿಂದೆ ಹನುಮನು ಇದ್ದೆ ಇರುವನು.. ಎಂಬ ಹಾಡನ್ನು ವೇದಿಕೆ ಮೇಲೆ ಹಾಡೋದಕ್ಕೆ ಶುರು ಮಾಡಿದ್ದರು. ಈ ವೇಳೆ ರಾಮನ ಹಾಡು ಹಾಡುತ್ತಿದ್ದಂತೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ. ವೆಂಕಟೇಶ್ ಎದ್ದು ಹೋರ ಹೋದರು ಎನ್ನಲಾಗಿದೆ. ಆದರೆ ಕಾರ್ಯಕ್ರಮದ ಅರ್ಧದಲ್ಲೇ ಯಾಕೆ ಹೋದರು, ಬೇರೆ ಏನಾದರೂ ಕಾರ್ಯಕ್ರಮವಿತ್ತಾ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಚಾಮರಾಜನಗರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಸಂಗೀತೋತ್ಸವಕ್ಕೆ ಅಪಾರ ಸಂಖ್ಯೆಯ ಜನರ ಹರಿದು ಬಂದಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಖ್ಯಾತ ಗಾಯಕ ಹೇಮಂತ್, ಜೀ ಕನ್ನಡದ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಗಾಯಕಿ ರೆಮೋ ಸೇರಿದಂತೆ ಹಲವರು ಭಾಗಿಯಾಗಿದ್ದರು.